ಪಾರ್ಕಿಂಗ್ ಸ್ಥಳವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಮಾಲಿಕರು; ಪಾರ್ಕಿಂಗ್ ನಿಯಮಗಳನ್ನು ಪಾಲಿಸದೇ ಇರುವ ಕಟ್ಟಡ ಮಾಲೀಕರಿಗೆ ಕೂಡಲೇ ನೋಟಿಸ್ ನೀಡಿ - ಉಡುಪಿ ಡಿಸಿ
ಉಡುಪಿ, ಆಗಸ್ಟ್ 18 (ಕೊ.ಮೀ):ಜಿಲ್ಲೆಯ ರಾಷ್ಟಿçÃಯ ಹೆದ್ದಾರಿ ರಸ್ತೆಗಳಲ್ಲಿ ಗುರುತಿಸಲಾದ ಅಪಘಾತವಾಗುವ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ಅಗತ್ಯವಿರುವ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳುವ ಮೂಲಕ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಈಗಾಗಲೇ ರಾಷ್ಟಿçÃಯ ಹೆದ್ದಾರಿಯಲ್ಲಿ 18 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ಬಹುತೇಕ ಕಾಮಗಾರಿಗಳಲ್ಲಿ ದಾರಿದೀಪ ಅಳವಡಿಕೆ, ರೋಡ್ ಮಾರ್ಕಿಂಗ್, ಪಾದಚಾರಿ ಕ್ರಾಸಿಂಗ್, ಝೀಬ್ರಾ ಕ್ರಾಸಿಂಗ್, ಸೂಚನಾ ಫಲಕ, ಹೈಮಾಸ್ಟ್ ದ್ವೀಪ ಬ್ಲಿಂರ‍್ಸ್ ಸೇರಿದಂತೆ ಮತ್ತಿತರ ಸುರಕ್ಷತಾ ವಿಧಾನಗಳನ್ನು ಅಳವಡಿಸದೇ ಇರುವುದು ಕಂಡುಬAದಿದೆ. ಇದರಿಂದ ರಸ್ತೆ ಅಪಘಾತದಲ್ಲಿ ಸಾವು-ನೋವುಗಳ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆ, ಶಾಶ್ವತ ಕಾಮಗಾರಿ ಕೈಗೊಳ್ಳುವವರೆಗೆ ತಾತ್ಕಾಲಿಕ ಸುರಕ್ಷತಾ ಕಾಮಗಾರಿಯನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದರು. ಜಿಲ್ಲೆಯ ಸಾರ್ವಜನಿಕರು ವಾಹನದಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕ...