ಪಾರ್ಕಿಂಗ್ ಸ್ಥಳವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಮಾಲಿಕರು; ಪಾರ್ಕಿಂಗ್ ನಿಯಮಗಳನ್ನು ಪಾಲಿಸದೇ ಇರುವ ಕಟ್ಟಡ ಮಾಲೀಕರಿಗೆ ಕೂಡಲೇ ನೋಟಿಸ್ ನೀಡಿ - ಉಡುಪಿ ಡಿಸಿ
ಉಡುಪಿ, ಆಗಸ್ಟ್ 18 (ಕೊ.ಮೀ):ಜಿಲ್ಲೆಯ ರಾಷ್ಟಿçÃಯ ಹೆದ್ದಾರಿ ರಸ್ತೆಗಳಲ್ಲಿ ಗುರುತಿಸಲಾದ ಅಪಘಾತವಾಗುವ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ಅಗತ್ಯವಿರುವ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳುವ ಮೂಲಕ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಈಗಾಗಲೇ ರಾಷ್ಟಿçÃಯ ಹೆದ್ದಾರಿಯಲ್ಲಿ 18 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ಬಹುತೇಕ ಕಾಮಗಾರಿಗಳಲ್ಲಿ ದಾರಿದೀಪ ಅಳವಡಿಕೆ, ರೋಡ್ ಮಾರ್ಕಿಂಗ್, ಪಾದಚಾರಿ ಕ್ರಾಸಿಂಗ್, ಝೀಬ್ರಾ ಕ್ರಾಸಿಂಗ್, ಸೂಚನಾ ಫಲಕ, ಹೈಮಾಸ್ಟ್ ದ್ವೀಪ ಬ್ಲಿಂರ‍್ಸ್ ಸೇರಿದಂತೆ ಮತ್ತಿತರ ಸುರಕ್ಷತಾ ವಿಧಾನಗಳನ್ನು ಅಳವಡಿಸದೇ ಇರುವುದು ಕಂಡುಬAದಿದೆ. ಇದರಿಂದ ರಸ್ತೆ ಅಪಘಾತದಲ್ಲಿ ಸಾವು-ನೋವುಗಳ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆ, ಶಾಶ್ವತ ಕಾಮಗಾರಿ ಕೈಗೊಳ್ಳುವವರೆಗೆ ತಾತ್ಕಾಲಿಕ ಸುರಕ್ಷತಾ ಕಾಮಗಾರಿಯನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದರು.
ಜಿಲ್ಲೆಯ ಸಾರ್ವಜನಿಕರು ವಾಹನದಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುವ ಸ್ಥಳಗಳಲ್ಲಿ ವಾಹನಗಳನ್ನು ಜಾಗರೂಕತೆಯಿಂದ ಚಾಲನೆ ಮಾಡಬೇಕು. ಸಾರಿಗೆ ಪ್ರಾಧಿಕಾರ ಸೂಚಿಸಿರುವ ವೇಗಮಿತಿಯಲ್ಲಿ ಸಂಚರಿಸುವುದರೊAದಿಗೆ ಯಾವುದೇ ಅವಘಡಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಉಡುಪಿ ನಗರ ವ್ಯಾಪ್ತಿಯಲ್ಲಿ 58 ಕ್ಕೂ ಹೆಚ್ಚು ವಿವಿಧ ವಾಣಿಜ್ಯ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಥಳವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವುದರಿಂದ, ಕಟ್ಟಡಗಳ ಮುಂಭಾಗ ರಸ್ತೆಯ ಮೇಲೆ ಅಂಗಡಿ ಮಾಲೀಕರು ಹಾಗೂ ಗ್ರಾಹಕರು ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿರುವ ಹಿನ್ನೆಲೆ, ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದೆ. ಪಾರ್ಕಿಂಗ್ ನಿಯಮಗಳನ್ನು ಪಾಲಿಸದೇ ಇರುವ ಕಟ್ಟಡ ಮಾಲೀಕರಿಗೆ ಕೂಡಲೇ ನೋಟಿಸ್ ನೀಡಿ, ನಿಯಮಾನುಸಾರ ಕಾನೂನಿನ ಅನ್ವಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. .
ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಬೇಕು. ರಾಷ್ಟಿçÃಯ ಹೆದ್ದಾರಿಯ ವಿವಿಧೆಡೆ ರಸ್ತೆಯ ಮಧ್ಯದಲ್ಲಿ ಜಾಹೀರಾತುಗಳನ್ನು ಅಳವಡಿಸಲು ಉಪಯೋಗಿಸಿರುವ ಕಂಬಗಳ ತೆರವು ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುವಂತಹ ಫಾಸ್ಟ್ ಫುಡ್ ಸೆಂಟರ್, ತಳ್ಳುವ ಗಾಡಿಗಳು ಹಾಗೂ ಗೂಡಂಗಡಿಗಳನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕೆಲವು ಬಸ್‌ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ, ಆಸ್ಪತ್ರೆ, ಶೈಕ್ಷಣಿಕ ಸಂಸ್ಥೆಗಳ ಮುಂಭಾಗದಲ್ಲಿ ಬಸ್‌ಗಳ ಸ್ಟಾಪ್ ನೀಡುತ್ತಿದ್ದು, ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗುತ್ತಿದೆ. ಶಾಲೆ ಹಾಗೂ ಆಸ್ಪತ್ರೆಗಳ ಬಳಿ ಬಸ್ ನಿಲ್ಲದೇ ಸೂಕ್ತ ನಿಲ್ದಾಣಗಳನ್ನು ಬಸ್‌ಗಳು ನಿಲ್ಲಿಸಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಟೋ ರಿಕ್ಷಾ ತಂಗುದಾಣಗಳಲ್ಲಿ ಎಲ್ಲಾ ಆಟೋ ರಿಕ್ಷಾ ಚಾಲಕರು ತಮ್ಮ ವಾಹನಗಳನ್ನು ನಿಲ್ಲಿಸಲು ಅನುಮತಿ ನೀಡಬೇಕೆಂದು ಮನವಿಗಳನ್ನು ನೀಡಿದ್ದು, ಈ ಸಂಬAಧ ಆರ್.ಟಿ.ಓ, ಪೊಲೀಸ್ ಇಲಾಖೆ ಹಾಗೂ ನಗರಸಭೆ ಆಯುಕ್ತರು ನಿಲ್ದಾಣ ಸಾಮರ್ಥ್ಯದ ಆಧಾರ ಮೇಲೆ ಆಟೋರಿಕ್ಷಾಗಳ ನಿಲುವಿಕೆಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಉಡುಪಿ ಅಂಬಲಪಾಡಿ ವಾರ್ಡಿನ ದೇವಸ್ಥಾನದ ಹಿಂಬದಿಯ ರಸ್ತೆಯಿಂದ ದೇವಸ್ಥಾನಕ್ಕೆ ಹೋಗುವ ರಸ್ತೆ ಕೂಡುವಲ್ಲಿ ಹಾಗೂ ಹೊಸದಾಗಿ ಡಾಂಬರೀಕರಣ ಮಾಡುವ ಸಮಯದಲ್ಲಿ ತೆರವುಗೊಳಿಸಲಾದ ಹಂಪ್ಸ್ಗಳನ್ನು ಪುನರ್ ನಿರ್ಮಿಸುವಂತೆ ಅಭಿಯಂತರರುಗಳಿಗೆ ತಿಳಿಸಿದರು.
ಹೆಬ್ರಿ ತಾಲೂಕಿನ ಪಂಚಾಯತ್ ವ್ಯಾಪ್ತಿಯ ರಿಕ್ಷಾ ನಿಲ್ದಾಣವನ್ನು ಖಾಯಂ ನಿಲ್ದಾಣವಾಗಿ ಮಾಡುವ ಬಗ್ಗೆ ಮನವಿ ಬಂದಿದ್ದು, ಲೋಕೋಪಯೋಗಿ ಹಾಗೂ ಆರ್.ಟಿ.ಓ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಅವಶ್ಯವಿದ್ದಲ್ಲಿ ಮಾತ್ರ ಖಾಯಂ ನಿಲ್ದಾಣ ಮಾಡಲು ಅನುಮತಿ ನೀಡುವಂತೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿ, ರಾಷ್ಟಿçÃಯ ಹೆದ್ದಾರಿಗಳಲ್ಲಿ ಮೀಡಿಯನ್ ಓಪನ್‌ಗಳನ್ನು ಮಾಡುವಾಗ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ಯಾವುದೇ ಅಡೆತಡೆಯಾಗದಂತೆ, ನಿಯಮಾನುಸಾರ ವಾಹನ ದಟ್ಟಣೆ ಆಗದೇ ಇರುವಂತಹ ಸ್ಥಳಗಳನ್ನು ಗುರುತಿಸಿ, ಮಾಡಬೇಕೆಂದ ಅವರು, ಪ್ರಮುಖ ರಸ್ತೆಗಳಲ್ಲಿ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ನೀಡುವ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ ಡಿ.ಎಫ್.ಓ ಗಣಪತಿ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷಿö್ಮÃ ನಾರಾಯಣ್ ನಾಯಕ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ
ಉಡುಪಿ, ಆಗಸ್ಟ್ 18 : ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಆಗಸ್ಟ್ 20 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಹೆಬ್ರಿ ತಾಲೂಕು ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ.
ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.
ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ : ಅರ್ಜಿ ಸಲ್ಲಿಕೆ- ಅವಧಿ ವಿಸ್ತರಣೆ
ಉಡುಪಿ, ಆಗಸ್ಟ್ 18 : ಐ.ಎ.ಎಸ್ / ಕೆ.ಎ.ಎಸ್ ಗೆಜೆಟೆಡ್ ಪ್ರೋಬೇಷನರ್ ಮತ್ತು ಗ್ರೂಪ್ ಸಿ ಆರ್.ಆರ್.ಬಿ & ಎಸ್.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಸೇವಾಸಿಂಧು ತಂತ್ರಾAಶ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 26 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ವ್ಯಕ್ತಿ ಸ್ಥಿತಿ ಚಿಂತಾಜನಕ : ವಾರಸುದಾರರಿಗೆ ಸೂಚನೆ
ಉಡುಪಿ, ಆಗಸ್ಟ್ 18 : ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಬೀರೇಂದ್ರ (34) ಎಂಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಮೃತ ವ್ಯಕ್ತಿಯ ವಾರಸುದಾರರಿಗೆ ಸೂಚನೆ
ಉಡುಪಿ, ಆಗಸ್ಟ್ 18 : ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ದೇವು (61) ಎಂಬ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ-ಸAಸ್ಥೆಗಳ ನೋಂದಣಿ ಕಡ್ಡಾಯ
ಉಡುಪಿ, ಆಗಸ್ಟ್ 18 : ವಿಕಲಚೇತನ ವ್ಯಕ್ತಿಗಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನ ಸಂಘಗಳು ಕಡ್ಡಾಯವಾಗಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ಕಾಯ್ದೆಯ ಸೆಕ್ಷನ್ 50, 51 ಮತ್ತು 52 ರ ಪ್ರಕಾರ ಸೇವಾಸಿಂಧು ತಂತ್ರಾAಶದ ಮೂಲಕ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ನೋಂದಣಿ ಮಾಡಿಸಿಕೊಳ್ಳಬೇಕು. ಈ ರೀತಿ ನೋಂದಣಿಯಾದ ಸಂಸ್ಥೆಗಳು ತಮ್ಮ ನೋಂದಣಿಯನ್ನು ಪ್ರತಿ 5 ವರ್ಷಗಳಿಗೊಮ್ಮೆ ನವೀಕರಿಸಬೇಕಾಗಿರುತ್ತದೆ.
ಆದರೆ ಪ್ರಸ್ತುತ ಜಿಲ್ಲೆಯಲ್ಲಿ ಹಲವಾರು ಸಂಘ ಸಂಸ್ಥೆಗಳು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಪ್ರಕಾರ ನೋಂದಣಿಯಾಗದೆ ವಿಕಲಚೇತನ ವ್ಯಕ್ತಿಗಳಿಗೆ ಕಾರ್ಯನಿರ್ವಹಿಸುತ್ತಿದ್ದು, ನೋಂದಣಿ ಮಾಡಿಕೊಳ್ಳದೆ ಕಾರ್ಯನಿರ್ವಹಿಸುತ್ತಿರುವ/ ನವೀಕರಣ ಚಾಲ್ತಿಯಲ್ಲಿ ಇಲ್ಲದಿರುವ ಸಂಸ್ಥೆಗಳ ವಿರುದ್ಧ ನೇರವಾಗಿ ಸಂಬAಧಪಟ್ಟ ಆರಕ್ಷಕ ಠಾಣೆಗಳಲ್ಲಿ ಎಫ್.ಐ.ಆರ್ ದಾಖಲಿಸಲು ಅವಕಾಶವಿರುತ್ತದೆ.
ಆದ್ದರಿಂದ ಜಿಲ್ಲೆಯಲ್ಲಿ ವಿಕಲಚೇತನ ಮಕ್ಕಳು ಮತ್ತು ವ್ಯಕ್ತಿಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಮತ್ತು ವಿಕಲಚೇತನ ಸಂಘಗಳು ಕಡ್ಡಾಯವಾಗಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016 ರ ಕಾಯ್ದೆಯ ಅಡಿ ಸೇವಾಸಿಂಧು ವೆಬ್‌ಸೈಟ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ/Sevಚಿsiಟಿಜhu/ಆeಠಿಚಿಡಿಣmeಟಿಣSeಡಿviಛಿes ನಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಿದ ನಂತರ ಭೌತಿಕ ಪ್ರತಿಯನ್ನು ಎಲ್ಲಾ ದಾಖಲೆಗಳೊಂದಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Comments